ಅಪರಾಧ ಉಪಯುಕ್ತ ಸುದ್ದಿ

ನೀಟ್ ಅಕ್ರಮ; ನಾಳೆ ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

Share It

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ನೀಟ್ -ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಈ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿಯೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಎನ್‌ಟಿಎ ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಿದೆ.

ಎನ್‌ಟಿಎಗೆ ನೂತನವಾಗಿ ಡಿಜಿಯಾಗಿ ಪ್ರದೀಪ್ ಸಿಂಗ್ ಖರೋಲಾ ನೇಮಕವಾಗಲಿದದ್ದಾರೆ. ನೀಟ್ ಪರೀಕ್ಷೆಯ ಬಗ್ಗೆ ಕೇಳಿಬಂದಿರುವ ಆರೋಪಗಳ ಕಾರಣಕ್ಕೆ ಪರೀಕ್ಷೆ ರದ್ದಾಗಿದೆ. ಶೀಘ್ರವೇ ಹೊಸ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಎನ್‌ಟಿಎ ಪ್ರಕಟಣೆ ತಿಳಿಸಿದೆ.

ಈ ನಡುವೆ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ನೀಟ್ ಅಕ್ರಮದ ಬಗ್ಗೆ ಟೀಕಿಸಿದ್ದಾರೆ. ಅನೇಕ ರಾಜ್ಯಗಳು ನೀಟ್ ಪರೀಕ್ಷೆಯನ್ನೇ ಬಂದ್ ಮಾಡುವಂತೆ ಆಕ್ರೋಶ ಹೊರಹಾಕಿವೆ. ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಮಾತನಾಡಿ, ಮೋದಿ ಅಧಿಕಾರಕ್ಕೆ ಬಂದ ಮೇಲೆ ಪರೀಕ್ಷೆಗಳು ರದ್ಧಾಗದ ದಿನಗಳೇ ಇಲ್ಲ, ಪ್ರಧಾನಿ ಮತ್ತು ಸುತ್ತಲಿನವರ ಅವಿವೇಕದಿಂದ ಹೀಗೆ ಆಗುತ್ತದೆ ಎಂದು ಟೀಕಿಸಿದ್ದಾರೆ.


Share It

You cannot copy content of this page