ಅಪರಾಧ ರಾಜಕೀಯ ಸುದ್ದಿ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

Share It

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜೆಡಿಎಸ್ ಕಾರ್ಯಕರ್ತನನ್ನೇ ತಮ್ಮ ಫಾರ್ಮ್ ಹೌಸ್ ಗೆ ಕರೆಸಿಕೊಂಡು, ಅಸಹಜವಾಗಿ ನಡೆದುಕೊಂಡಿರುವ ಕುರಿತು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ವಹಿಸಿದ್ದು, ಸೂರಜ್ ರೇವಣ್ಣನನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಭಾನುವಾರ ರಜಾದಿನವಾದ್ದರಿಂದ ಬೆಂಗಳೂರಿಗೆ ಕರೆತಂದು ನ್ಯಾಯಾಧೀಶರ ನಿವಾಸದಲ್ಲಿಯೇ ಸೂರಜ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ. ನ್ಯಾಯಾಧೀಶರು ಸೂರಜ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

updating…


Share It

You cannot copy content of this page