ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ 17 ಜನ ಆರೋಪಿಗಳ ಪೈಕಿ 4 ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಮೊರೆ ಹೋಗಿದ್ದರು.
ಇದೀಗ 24ನೇ ಎಸಿಎಂಎಂ ಕೋರ್ಟ್ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 4 ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ರವಿಶಂಕರ್, ಕೇಶವಮೂರ್ತಿ, ಕಾರ್ತಿಕ್ ಮತ್ತು ನಿಖಿಲ್ ಅವರನ್ನು ಇದೀಗ ಪೊಲೀಸರು ಕೋರ್ಟ್ ಅನುಮತಿ ಮೇರೆಗೆ ತುಮಕೂರು ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.

