ಅಪರಾಧ ರಾಜಕೀಯ ಸುದ್ದಿ

ಹಿಂದೂ ಫೈರ್ ಬ್ರಾಂಡ್ ಮನೆಯಲ್ಲಿ ಬೆಂಕಿ ಅವಘಡ

Share It


ಶಿರಸಿ : ಹಿಂದೂ ಫೈರ್ ಬ್ರಾಂಡ್ ಎನಿಸಿಕೊಂಡಿದ್ದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನಿವಾಸದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು.

ಶಿರಸಿಯ ಕೆಎಚ್‌ಬಿ ಕಾಲನಿಯಲ್ಲಿರುವ ಅನಂತಕುಮಾರ್ ಅನಂತಕುಮಾರ್ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆವರಿಸಿದೆ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಮನೆಯನ್ನು ಆವರಸಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ.

ಲಕ್ಷಾಂತರ ರುಪಾಯಿ ಬೆಲೆಬಾಳುವ ಜಿಮ್ ವಸ್ತುಗಳೆಲ್ಲ ಸುಟ್ಟುಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಶಿರಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Share It

You cannot copy content of this page