ಉಪಯುಕ್ತ ಸುದ್ದಿ

ರೈತರಿಗೆ ವಿವಿಧ ಯೋಜನೆಗಳಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

Share It

ತುಮಕೂರು : ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗಾಗಿ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಎಲ್ಲಾ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟೀಯ ತೋಟಗಾರಿಕೆ ಮಿಷನ್, ರಾಷ್ಟೀಯ ಕೃಷಿ ವಿಕಾಸ, ಎಸ್.ಎಂ.ಎ.ಎಂ ಯಾಂತ್ರೀಕರಣ, ತೆಂಗು ಅಭಿವೃದ್ಧಿ, ಸಮಗ್ರ ತೋಟಗಾರಿಕೆ ಅಭಿವೃದ್ಧಿ, ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ, ಮಧುವನ ಮತ್ತು ಜೇನು ಸಾಕಾಣಿಕೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಡಿಕೆ ಬೆಳೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗಾಗಿ ಈ ಸಹಾಯಧನ ಪಡೆಯಬಹುದಾಗಿದ್ದು, ವಿಕಲಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಲ್ಪ ಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ವಿತರಿಸಲಾಗುವುದು.

ಆಸಕ್ತ ರೈತ ಫಲಾನುಭವಿಗಳು ತಾಲ್ಲೂಕು ತೋಟಗಾರಿಕೆ ಕಛೇರಿ/ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.


Share It

You cannot copy content of this page