ಹೊಸೂರು: ತಮಿಳುನಾಡಿನ ಹೊಸೂರಿನಲ್ಲಿ ಚೆನೈ ನಂತರ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.
ಈ ಬಗ್ಗೆ ಅವರು ಹೇಳಿಕೆ ನೀಡಿ “ಕರ್ನಾಟಕದ ಬೆಂಗಳೂರು ಮಹಾನಗರಕ್ಕೆ ಸಮೀಪವಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2 ಸಾವಿರ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು.
ಈ ನೂತನ ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೆರೆಯ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಆರ್ಥಿಕವಾಗಿ ಉಪಯೋಗವಾಗಲಿದೆ ಎಂದು ತಿಳಿಸಿದರು.