ಆರೋಗ್ಯ ಸುದ್ದಿ

ಬೆಂಗಳೂರಿನಲ್ಲಿ ಡೆಂಗ್ಯು ಜ್ವರಕ್ಕೆ ಇಬ್ಬರು ಸಾವು!

Share It

ಬೆಂಗಳೂರು : ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.

ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಈ ಬಗ್ಗೆ ಬಿಬಿಎಂಪಿ ಮೂಲಗಳಿಂದ ಮಾಹಿತಿ ನೀಡಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ ಬೆಂಗಳೂರಿನಲ್ಲಿ ಸಂಭವಿಸಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಓಟ ಜೋರಾಗಿದೆ. ಕಳೆದ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್‌ಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದವು.

ಸಾವಿನ ಜತೆಗೆ ಬೆಂಗಳೂರಿನಲ್ಲೂ ಡೆಂಗ್ಯೂ ಕೇಸ್​​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ 2457 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಜಾಗ್ರತೆಯಿಂದ ಇರಿ ಎಂದು ಹೇಳಿದ್ದಾರೆ.

ಸದ್ಯ ಡೆಂಗ್ಯೂ ಆರ್ಭಟ ಬಿಬಿಎಂಪಿಗೆ ನಿದ್ದೆಗೆಡಿಸಿದೆ. ಮನೆ ಸರ್ವೇ ನಡೆಸಿ, ಡೆಂಗ್ಯೂ ಓಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 14 ಲಕ್ಷ ಮನೆಗಳ ಸರ್ವೇಗೆ ಟಾಸ್ಕ್ ನೀಡಲಾಗಿದೆ. ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪ್ರತಿ ಶುಕ್ರವಾರ ಮನೆಗಳಿಗೆ ಭೇಟಿ ನೀಡಿ, ಸೊಳ್ಳೆಗಳ ಲಾರ್ವಾ ಪತ್ತೆ ಹಚ್ಚುತ್ತಿದ್ದಾರೆ. ಮನೆಯ ಅಕ್ಕ-ಪಕ್ಕ ನೀರು ನಿಲ್ಲದಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಪಾಲಿಕೆ ಟೀಮ್​ನ ಜೊತೆ ನರ್ಸಿಂಗ್ ಸ್ಟೂಡೆಂಟ್ಸ್, ಸ್ವಯಂ ಸೇವಕರು ಕೈ ಜೋಡಿಸಿದ್ದಾರೆ.

ರಾಜ್ಯದಲ್ಲಿಗ ಸುಮಾರು 5187 ಡೆಂಗ್ಯೂ ಕೇಸ್​ಗಳಿವೆ. ಬೆಂಗಳೂರಿನಲ್ಲಂತೂ ಡೆಂಗ್ಯೂ ಸ್ಫೋಟವೇ ಆಗಿದೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ- ಜಿಲ್ಲೆಯಲ್ಲೂ ಜನ ಡೆಂಗ್ಯೂಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯಲ್ಲಿ ನರಳಾಡ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆಯಂತೆ.


Share It

You cannot copy content of this page