ಬೆಂಗಳೂರು: ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದ್ರೆ ಮಾತ್ರ ಉತ್ತರ ಕರ್ನಾಟಕದ ಅಭಿವೃದ್ಧಿ ಸಾಧ್ಯ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ತಾವು ಆಡಿದ ಮಾತುಗಳಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ.