ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ

Share It

ಬೆಂಗಳೂರು :ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.

ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಇಲಾಖೆಗಳಿಗೆ ಪ್ರಥಮ ಆದ್ಯತೆಯ ಮೇರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಇಲಾಖೆಯ ಮೂಲಕ ಪತ್ರ ಬರೆಯಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


Share It

You May Have Missed

You cannot copy content of this page