ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿ ಸಿಐಡಿ ಕಸ್ಟಡಿಯಲ್ಲಿರುವ ವಿಧಾಮ ಪರಿಷತ್ ಸದಸ್ಯ ಸೂರಜ್ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಗಿಯಲಿದ್ದು, ಇಂದು ಅವರು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಸಿಐಡಿ ಕಸ್ಟಡಿ ಇಂದಿಗಡ ಅಂತ್ಯವಾಗುವ ಹಿನ್ನೆಲೆಯಲ್ಲಿ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಹೆಚ್ಚಾಗಿದ್ದು, ಅವರು ಇಂದೇ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ಸಹೋದರ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರ ತಂದೆ ಎಚ್.ಡಿ.ರೇವಣ್ಣ ಕೂಡ ಪರಪ್ಪನ ಅಗ್ರಹಾರ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆ ಮೂಲಕ ಒಂದೇ ಕುಟುಂಬದ ಮೂವರು ರಾಜಕಾರಣಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದು ವಿಶೇಷ.
ಸೂರಜ್ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜವಾಗಿ ಲೈಂಗಿಕ ದೌರ್ಜನ್ಯ, ನಡೆಸಿದ ಆರೋಪದಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ದಾಖಲಾಗಿದ್ದ ದೂರಿನ ಅನ್ವಯ ಅವರನ್ನು ಬಂಧಿಸಲಾಗಿದೆ.