ಬೆಂಗಳೂರು: ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಕಾಲಮಿತಿಯಲ್ಲಿ ಪ್ರಶ್ನಿಸಬೇಕು ಎಂಬ ಅಭಿಪ್ರಾಯವನ್ನು ಅಲ್ಲಗಳೆದಿರುವ ಹೈಕೋಟರ್್, ಇಂತಹದ್ದನ್ನು ಪ್ರಶ್ನಿಸಲು ಕಾಲಮಿತಿಯ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ.
ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ ಹುದ್ದೆ ಗಿಟ್ಟಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಡಾ. ಗುಡ್ಡದೇವ್ ಗೊಲ್ಲಪ್ಪ ಯಡ್ರಾಮಿ ಸಲ್ಲಿಸಿದ್ದ ಅಜರ್ಿ ವಿಚಾರಣೆ ನಡೆಸಿದ ನ್ಯಾಯಮೂತರ್ಿ ವಿ. ಶ್ರೀಶಾನಂದ ಅವರಿದ್ದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಅಜರ್ಿದಾರರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ, ವಿಜಯಪುರದಲ್ಲಿ ಕಾಲೇಜಿಗೆ ಸೇರುವಾಗ ಭತರ್ಿ ಮಾಡಿದ್ದ ನಮೂನೆಯಲ್ಲಿ ಅಜರ್ಿದಾರರು ತಾನು ಹಿಂದೂ(ಕುರುಬ), ಹಿಂದುಳಿದ ವರ್ಗದಕ್ಕೆ ಸೇರಿದವನು ಎಂದು ಉಲ್ಲೇಖಿಸಿದ್ದಾರೆ. ಆದರೆ ಉದ್ಯೋಗದ ವೇಳೆಗೆ ಅವರು ಗೊಂಡ ಜಾತಿಗೆ ಸೇರಿದ ಪರಿಶಿಷ್ಟ ಪಂಗಡದವರು ಎಂದು ಬದಲಾಯಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪೀಠ ಪ್ರಶ್ನಿಸಿದೆ.
ಅಜರ್ಿದಾರರು ನಿಜವಾಗಿಯೂ ಎಸ್ಟಿ ವರ್ಗಕ್ಕೆ ಸೇರಿದ್ದರೆ ಅವರು 1975ರಲ್ಲಿ ಕಾಲೇಜಿಗೆ ಸೇರುವಾಗ ಕುರುಬ ಜಾತಿ ಎಂದು ಉಲ್ಲೇಖಿಸುತ್ತಿರಲಿಲ್ಲ. ಹಾಗಾಗಿ ಅಜರ್ಿದಾರರು ಶುದ್ಧ ಹಸ್ತದಿಂದ ನ್ಯಾಯಾಲಯದ ಮೊರೆ ಬಂದಿಲ್ಲ, ತಮ್ಮ ಪರವಾಗಿ ಆದೇಶವನ್ನು ಪಡೆಯಲು ಅವರು ಹಲವು ಸಂಗತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಜತೆಗೆ, ಅವರು ನೇಮಕ ಪ್ರಾಧಿಕಾರದ ಮುಂದೆ ನಕಲಿ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಅದರಿಂದ ಉದ್ಯೋಗಕ್ಕೆ ಸೇರಿ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ. ಹಾಗಾಗಿ ಅವರ ಅಜರ್ಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯುಪೀಠ ಹೇಳಿದೆ.
ಅಜರ್ಿದಾರರು, ಕಲಬುರಗಿ ಜಿಲ್ಲೆಯಲ್ಲಿ ಕುರುಬ ಮತ್ತು ಗೊಂಡ ಸಮುದಾಯ ಒಂದೇ ಎಂದು ಕರೆಯಲಾಗುತ್ತಿದೆ. ಎರಡೂ ಒಂದೇ ಅರ್ಥವನ್ನು ನೀಡುತ್ತವೆ. 1993ರಲ್ಲಿ ಎರಡೂ ಒಂದೇ ಸಮುದಾಯಗಳೆಂಬ ಬಗ್ಗೆ ವ್ಯಾಪಕ ಚಚರ್ೆ ನಡೆದಿತ್ತು. 1997ರಲ್ಲಿ ಸಕರ್ಾರ ಕಲಬುರಗಿ ಜಿಲ್ಲೆಯಲ್ಲಿನ ಗೊಂಡ ಸಮುದಾಯವನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ವಾದಿಸಿದ್ದರು. ಆದರೆ ಅದನ್ನು ಅಲ್ಲಗಳೆದ ಸಕರ್ಾರದ ಪರ ವಿಶೇಷ ವಕೀಲ ಸಿ. ಜಗದೀಶ್, ಈ ವಿಷಯಕ್ಕೆ ಸಂಬಂಧಿಸಿದಂತೆ 1986ರ ಆದೇಶವನ್ನು ಹಲವು ಪೀಠಗಳಲ್ಲಿ ಪ್ರಶ್ನಿಸಲಾಗಿದೆ. ಆ ಆದೇಶದ ಲಾಭ ಪಡೆಯಲು ಸಾಧ್ಯವಿಲ್ಲ. ಗೊಂಡ ಮತ್ತು ಕುರುಬ ಎರಡೂ ಬೇರೆ ಬೇರೆ ಜಾತಿಗಳು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.