ಅಪರಾಧ ರಾಜಕೀಯ ಸುದ್ದಿ

ನಾಳೆ ಹತ್ರಾಸ್ ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

Share It


ಹತ್ರಾಸ್: ಸತ್ಸಂಗದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿರುವ ಹತ್ರಾಸ್‌ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಚೋಲೆ ಬಾಬಾನ ಆಶ್ರಮದಲ್ಲಿ ನಡೆಯುತ್ತಿದ್ದ ಪ್ರವಚನದ ವೇಳೆ ನಡೆದ ಘಟನೆಯಲ್ಲಿ ೧೨೧ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು ೧೦೦ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಭೇಟಿ ವೇಳೆ ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನ ರಾಹುಲ್ ಗಾಂಧಿ ಭೇಟಿ ಮಾಡಲಿದ್ದು, ಕೇಂದ್ರ ಸರಕಾರದಿಂದಲೂ ಪರಿಹಾರ ಘೋಷಣೆ ಮಾಡುವಂತೆ ಒತ್ತಾಯಿಸಲಿದ್ದಾರೆ. ಈಗಾಗಲೇ, ಯುಪಿ ಸರಕಾರ ತಲಾ ಎರಡು ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಿದೆ. ಜತೆಗೆ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದೆ.


Share It

You cannot copy content of this page