ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಬಿ‌.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

Share It

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ(ಅಳಿಯ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ
ತಡವಾಗಿ ಬೆಳಕಿಗೆ ಬಂದಿವೆ.

ಹಿಂದಿನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು (ಜುಲೈ 8) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷಗಳ ಹಿಂದೆ ಬಿ.ಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ಏನು? ಎನ್ನುವುದು ತಿಳಿದುಬಂದಿಲ್ಲ.

ವಿಷಯ ತಿಳಿದ ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಬಂದ ಸಂಬಂಧಿಕರು ಗೋಳೊ ಎಂದು ಅತ್ತು ಅತ್ತು ಕಣ್ಣೀರು ಹಾಕಿ ರೋಧಿಸಿದರು. ನಂತರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಎಂದು ದಿಢೀರ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದ ಮಾವ ಮಾಜಿ ಸಚಿವ ಬಿ‌.ಸಿ‌. ಪಾಟೀಲ್ ಅವರು ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.

ಇದಾದ ನಂತರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ದೊಡ್ಡ ಮಗಳ ಗಂಡ, ನೆಚ್ಚಿನ ಅಳಿಯನನ್ನು ಕಳೆದುಕೊಂಡು ದುಃಖದಲ್ಲಿದ್ದ ಬಿ.ಸಿ.ಪಾಟೀಲ್ ಅವರನ್ನು ಸಂತೈಸಿದರು.

ಪ್ರತಾಪ್‌ ಕುಮಾರ್ ಅವರು ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಗ್ರಾಮದವರಾದರೂ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳನ್ನು ಮದುವೆಯಾದ ನಂತರ ಹಿರೇಕೆರೂರಿನಲ್ಲಿ ವಾಸ್ತವ್ಯ ಹೂಡಿ ಅಲ್ಲಿ ತೋಟದ ಉಸ್ತುವಾರಿ ನೋಡಿಕೊಂಡು ಎಲ್ಲರ ಮನ ಗೆದ್ದಿದ್ದರು‌. ಇತ್ತೀಚೆಗೆ ಪ್ರತಾಪ್ ಕುಮಾರ್ ಯಾವುದೇ ಸಮಸ್ಯೆಯಿಂದ ನೊಂದಿರಲಿಲ್ಲ ಮತ್ತು ಎಲ್ಲರೊಂದಿಗೆ ಅನ್ಯೋನ್ಯವಾಗೇ ಇದ್ದರು. ಆದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಏನು ಕಾರಣ? ಎಂಬುದು ಯಾರಿಗೂ ತಿಳಿಯದಾಗಿದೆ.


Share It

You cannot copy content of this page