ರಾಜಕೀಯ ಸುದ್ದಿ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ವಿಫಲ

Share It

ಬೆಂಗಳೂರು:ದಲಿತರ ಮೇಲಿನ ದೌರ್ಜನ್ಯ ತಡೆಯಲು ರೂಪಿಸಿರುವ AC ನೇತೃತ್ವದ ದೌರ್ಜನ್ಯ ತಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸದಿರುವುದಕ್ಕೆ ಸಿಎಂ ಗರಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಸಭೆ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದನ್ನು ಯಾವುದೇ ತಪ್ಪಿಸಬಾರದು ಎಂದು ಎಚ್ಚರಿಕೆ ನೀಡಿದರು. ಸಭೆಯನ್ನೇ ನಡೆಸದ 13 ಉಪ ವಿಭಾಗಗಳ ಬಗ್ಗೆ DC ಗಳನ್ನು ಖಾರವಾಗಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಇದೇ ತಪ್ಪುಗಳು ಮುಂದುವರಿದರೆ, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಸಿಂಧುತ್ವ ಪ್ರಮಾಣಪತ್ರ ವಿಚಾರದಲ್ಲಿ ಅಸಡ್ಡೆ ಬೇಡ. ಅರ್ಹರಾಗಿದ್ದರೆ ತಕ್ಷಣ ಕೊಡಿ, ಅರ್ಹತೆ ಇಲ್ಲದಿದ್ದರೆ ಸ್ಪಷ್ಟವಾಗಿ‌ ತಿಳಿಸಿ: ಸತಾಯಿಸಬೇಡಿ, ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಕೊಲೆ ಪ್ರಕರಣಗಳಲ್ಲಿ ತಡ ಮಾಡದೆ ಅನುಕಂಪದ ಸರ್ಕಾರಿ ನೌಕರಿ ನೀಡಿ ಎಂದು ಸಿ.ಎಂ.ಸೂಚನೆ ನೀಡಿದರು.

ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು ಎಂದು ಎಚ್ಚರಿಸಿದರು.

ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


Share It

You cannot copy content of this page