ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು.
ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಇಂದು (ಜುಲೈ 11) ಬೆಳಗ್ಗೆ ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿದ್ದು, ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದೀಗ ಅಂತಿಮವಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
