ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಸಿಬಿಐ ಎಫ್‌ಐಆರ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಬೇಲಾ ಎಂ. ತ್ರಿವೇದಿ ಮತ್ತು ಎಸ್.ಸಿ ಶರ್ಮಾ ಅವರಿದ್ದ ಸುಪ್ರೀಂಕೋರ್ಟ್ ನ್ಯಾಯಪೀಠ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ. ಅಕ್ಟೋಬರ್ 19, 2023ರಲ್ಲಿ ಹೈಕೋರ್ಟ್ FIR ರದ್ದತಿ ಮನವಿಯನ್ನು ತಿರಸ್ಕರಿಸಿತ್ತು. ಈ ಆದೇಶವನ್ನು ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
