ಸುದ್ದಿ

ಶಿರೂರು ದುರಂತ ಸ್ಥಳಕ್ಕೆ ಲಾರಿ ಏರಿದ ಡಿಸಿ, ಎಸ್ಪಿ, ಸಿಇಒ

Share It

ಕಾರವಾರ : ಅರಗಾ ಬಳಿ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನೀರು ತುಂಬಿದೆ. ಬೈಕ್ ಮತ್ತು ಕಾರಿನಲ್ಲಿ ಸಂಚರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಶಿರೂರಿಗೆ ಹೋಗುವ ಅನಿವಾರ್ಯತೆ ಇರುವ ಕಾರಣ ಅಧಿಕಾರಿಗಳು ಲಾರಿ ಏರಿ ಪ್ರಯಾಣ ಬೆಳೆಸಿರುವುದು ಇದೀಗ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಲಾರಿ ಮೂಲಕ ಪ್ರಯಾಣ ಬೆಳೆಸಿದ್ದಾರೆ.

ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಮಂಗಳವಾರ ಬಹುದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಗುಡ್ಡ ಕುಸಿತವಾಗಿ ಅಪಾರ ಪ್ರಮಾಣದ ಹಾನಿಯಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ, ಎಸ್ಪಿ ನಾರಾಯಣ ಎಂ, ಸಿಇಒ ಈಶ್ವರ ಕಾಂದೂ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಲಾರಿ ಏರಿ ಹೋದ ಅಧಿಕಾರಿಗಳು.


Share It

You cannot copy content of this page