ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.
ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 18ರ ಬಳಿಕ ಕರಾವಳಿ ತೀರದ 3 ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.