ಜೈಪುರ (ರಾಜಸ್ಥಾನ): ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಏಳು ಜೀವಗಳು ಬೆಂದು ಕರಕಲಾಗಿವೆ. ಇದರಲ್ಲಿ ಎರಡು ಮುದ್ದು ಕಂದಮ್ಮಗಳಿವೆ ಎಂಬುದು ವಿಪಯರ್ಾಸ.
ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಅಪಘಾತವಾಗಿದೆ. ಈ ವೇಳೆ ಬೆಂಕಿ ಹೊತ್ತುಕೊಂಡು ಇಬ್ಬರು ಮಕ್ಕಳು, ಮೂವರು ಮಹಿಳೆಯರು ಸೇರಿ ಏಳು ಮಂದಿ ಸಜೀವ ದಹನವಾಗಿದ್ದಾರೆ. ಮೃತರೆಲ್ಲರೂ ದೇವಸ್ಥಾನದಿಂದ ಮೆನೆಗೆ ಮರಳುತ್ತಿದ್ದರು ಎಂದು ವರದಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಉತ್ತರ ಪ್ರದೇಶದ ಮೀರತ್ ನಿವಾಸಿಗಳು ಎಂದು ತಿಳಿದುಬಂದಿದೆ. ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಸಾರ್ಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಬೆಂಕಿ ಹೊತ್ತಿಕೊಂಡ ನಂತರ ಕಾರಿನ ಬಾಗಿಲು ತೆರೆಯಲು ಸಾಧ್ಯವಾಗದೆ ಏಳು ಜನರೂ ಸಜೀವ ದಹನವಾಗಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.