ಸುದ್ದಿ

ಮನೆ ಊಟ, ಪುಸ್ತಕ, ಹಾಸಿಗೆ ಬೇಡಿಕೆಯ ದರ್ಶನ್ ಅರ್ಜಿ ಜು.25 ಕ್ಕೆ ಇತ್ಯರ್ಥ

Share It

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ನಡೆಯಿತು. ದರ್ಶನ್ ಪರ ವಕೀಲ ರಾಘವೇಂದ್ರ ಅವರು ವಾದ ಮಂಡಿಸಿದ್ದು ನಟ ಎಂಬ ಕಾರಣಕ್ಕೆ ಕೈದಿಯ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ವಾದಿಸಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸರ ಪರ ವಕೀಲರಾದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು, ಕೊಲೆ ಆರೋಪಿಗೆ ಈ ಸೌಕರ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ವಾದಿಸಿದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರು ಆದೇಶ ಕಾಯ್ದಿರಿಸಿದ್ದು ಜುಲೈ 25ರಂದು ತೀರ್ಪು ನೀಡಲಿದ್ದಾರೆ.


Share It

You cannot copy content of this page