ಬೆಳಗಾವಿ : ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯ ಆಗಿರುವುದರಿಂದ ಅದರ ಪರಿಣಾಮ ಬೆಳಗಾವಿ ಜಿಲ್ಲೆಯ ನದಿ ಪಾತ್ರಗಳಲ್ಲಿ ಭಾರಿ ಪ್ರಮಾಣದಲ್ಲಿ ನದಿಗಳಲ್ಲಿ ನೀರು ಹರಿಯುತ್ತಿದೆ.
ಬೆಳಗಾವಿ ಜಿಲ್ಲೆ ಲೋಂಡಾದಲ್ಲಿ 7 ಸೆಂ.ಮೀ. ಮಳೆ ಸುರಿದಿದೆ.
ಪ್ರತಿವರ್ಷದಂತೆ ಈ ವರ್ಷವೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅಲ್ಲಿಂದ ಬೆಳಗಾವಿ ಜಿಲ್ಲೆಗೆ ಪ್ರವೇಶಿಸುವ ನದಿಕೊಳ್ಳಗಳು ಉಕ್ಕೇರಿ ಹರಿಯುತ್ತೇವೆ. ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿರುವುದು ಈ ಸಲದ ಮಳೆಗಾಲದ ವಿಶೇಷತೆಯಾಗಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಹೊರವಲಯದ ದತ್ತ ಮಂದಿರ ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ಹಾಗೂ ಅದರ ಉಪನದಿಗಳು ತುಂಬಿ ಹರಿಯುತ್ತಿವೆ. ಬೆಳಗಾವಿ ಹಾಗೂ ಖಾನಾಪುರ ತಾಲೂಕಿಗೆ ಸೋಮವಾರ ಮತ್ತು ಮಂಗಳವಾರ ರಜೆ ಸಾರಲಾಗಿದ್ದು ಮಂಗಳವಾರ ಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಸಲದ ಮಳೆಗಾಲದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸಾಕಷ್ಟು ಪರಿಣಾಮ ಬೀರಿ ಇರುವುದು ಗಮನ ಸೆಳೆದಿದೆ.