ಸುದ್ದಿ

ಗೋಕಾಕ-ಪಾಶ್ಚಾಪುರ ರಸ್ತೆಯಲ್ಲಿ ಉರುಳಿದ ಶಾಲಾ ಬಸ್: ವಿದ್ಯಾರ್ಥಿಗಳಿಗೆ ಗಾಯ

Share It

ಬೆಳಗಾವಿ: ಗೋಕಾಕ ತಾಲೂಕಿನ ಮೇಲಮಟ್ಟಿಯ ಗೋಕಾಕ- ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಐದು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳು ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಸ್ಟೇರಿಂಗ್ ಬಂದ್ ಆದ ಕಾರಣ ಬಸ್ ಉರುಳಿ ಬಿದ್ದಿದೆ ಎನ್ನಲಾಗಿದೆ.


Share It

You cannot copy content of this page