ಸುದ್ದಿ

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ : ಪತಿ ಹುದ್ದೆಗೆ ಪತ್ನಿ ಹೆಸರು ಘೋಷಣೆ

Share It

ಬೆಂಗಳೂರು :ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಿನಿ ರಜನೀಶ್‌ Himself ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್‌, ರಜನೀಶ್‌ ಗೋಯಲ್‌ ಅವರ ಪತ್ನಿ ಎಂಬುದು ಗಮನಾರ್ಹ ಸಂಗತಿ.

ರಜನೀಶ್‌ ಗೋಯಲ್‌ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ.

ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು.

“ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ” ಎಂಬುದಾಗಿ ಅವರು ತಿಳಿಸಿದರು.


Share It

You cannot copy content of this page