ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಹಗುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
