ಸುದ್ದಿ

ಗಾಯತ್ರಿ ಸೋಲಿಗೆ ಯಾರು ಕಾರಣರೆಂದು ಗೊತ್ತಿದೆ: ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಕಿಡಿ

Share It

ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಪತ್ನಿ ಗಾಯತ್ರಿ ಸೋಲಿಗೆ ಯಾರು ಕಾರಣ ಅಂತ ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪರೋಕ್ಷವಾಗಿ
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮ ದೇವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಬಿಜೆಪಿ ಒಡೆದ ಮನೆಯಾಗಿದೆ, ಇದು ಸತ್ಯವಾದ ಮಾತು ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ರಾಜ್ಯ ನಾಯಕರು ಬಂದು ನಾಟಕ ಮಾಡಿ ಹೋದರು. ಎಷ್ಟು ನಾಟಕವಾಡಿದರೂ ಅಂದರೆ ನಮಗೆ ಮಾತನಾಡಲು ಕೂಡ ಬಿಡಲಿಲ್ಲ. ಒಂದು ಕಡೆಯ ಮಾತು ಕೇಳಿ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದರು ಎಂದಿದ್ದಾರೆ.

ನನ್ನ ಬರ್ತ್​​ಡೇಗೆ ಬರಲಿಲ್ಲ, ಮತದಾರರಿಗೆ ಕೃತಜ್ಞತಾ ಸಮಾರಂಭಕ್ಕೂ ಬರಲಿಲ್ಲ. ಕೃತಜ್ಞತಾ ಸಮಾರಂಭಕ್ಕೆ ಯಾರು ಬಂದಿಲ್ವೋ ಅವರೇ ಸೋಲಿಗೆ ಕಾರಣ. ಎಲ್ಲಾ ಸಮಾರಂಭಕ್ಕೂ ನಾವು ಅವರನ್ನು ಆಹ್ವಾನ ಮಾಡಿದ್ದರೂ ಬಂದಿಲ್ಲ. ಎಂಪಿಆರ್​ ​ಮತ್ತು​ ಟೀಮ್​ನಿಂದಲೇ ಸೋಲು ಅನುಭವಿಸಿದ್ವಿ ಎಂದು ಪರೋಕ್ಷವಾಗಿ ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ್ ವಾಗ್ದಾಳಿ ಮಾಡಿದ್ದಾರೆ.

ಕೇಂದ್ರ ಬಜೆಟ್​ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಳ್ಳೆಯ ಬಜೆಟ್​ ನೀಡಿದ್ದಾರೆ. ಯುವಕ, ಯುವತಿಯರು, ಮಹಿಳೆಯರು, ರೈತರು ಸೇರಿದಂತೆ ಎಲ್ಲರಿಗೂ ಒಳ್ಳೆಯದಾಗುವ ನಿಟ್ಟಿನಲ್ಲಿ ಬಜೆಟ್​ ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಅವರಿಗೆ ಬಿಜೆಪಿ ಟಿಕೆಟ್​ ನೀಡಿತ್ತು. ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್​ ಕೂಡ ಲೋಕಾ ಟಿಕೆಟ್​ ಆಕಾಂಕ್ಷಿ ಆಗಿದ್ದರು. ಅವರಿಗೆ ಟಿಕೆಟ್​ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್​ ನಿವಾಸದ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ್ದ.


Share It

You cannot copy content of this page