ಸಿದ್ದರಾಮಯ್ಯ ವಿರುದ್ಧ ಮೂಡ ಆರೋಪ: ರಾಜ್ಯದಲ್ಲಿ ರಕ್ತಕ್ರಾಂತಿಯ ಎಚ್ಚರಿಕೆ
ಬೆಂಗಳೂರು: ಮೂಡ ಹಗರಣವನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಹೋರಾಟದ ಜತೆಗೆ ಕುತಂತ್ರದಿಂದ ಸರಕಾರ ಅಸ್ಥಿರ ಗೊಳಿಸುವಬಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಇಂತಹ ಸ್ಥಿತಿಯನ್ನು ಬಿಜೆಪಿ ನಿರ್ಮಿಸಿದರೆ, ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು ಶಾಸಕ ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.
ಮೂಡ ಹಗರಣದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಸದನದಲ್ಲಿ ಗದ್ದಲ ಎಬ್ಬಿಸಿತ್ತು. ಆ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಿತ್ತು. ಇದೀಗ ಬಿಜೆಪಿ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ನಡುವೆ ರಾಜ್ಯಪಾಲರು ಪ್ರಕರಣದ ಸಂಬಂಧ ಎರಡನೇ ಸಲ ವರದಿ ಕೇಳಿದ್ದಾರೆ. ಅದರಲ್ಲೂ ದೆಹಲಿದ್ದಾಗಲೇ ವರದಿ ಕೇಳಿರುವುದು ಅನುಮಾನಕ್ಕೆ ಕಾರಣವಾಗಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಹಾಸನದಲ್ಲಿ ಮಾತನಾಡಿರುವ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಿದ್ದರಾಮಯ್ಯ ಸರಕಾರವನ್ನು ವಾಮಮಾರ್ಗದಲ್ಲಿ ಹಳಿಯುವ ಪ್ರಯತ್ನ ನಡೆಸಿದರೆ, ರಾಜ್ಯದಲ್ಲಿ ರಕ್ತಕ್ರಾಂತಿಯಾಗಲಿದೆ ಎಂದು ಎಚ್ಚರಿಸಿದ್ದಾರೆ. ಹಗರಣಗಳ ಸಂಬಂಧ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದರೇ ಅಥವಾ ಇ.ಡಿ ಉಪಯೋಗಿಸಿಕೊಂಡು ಅನ್ಯ ಮಾರ್ಗಕ್ಕೆ ರಕ್ತಕ್ರಾಂತಿ ಆಗುತ್ತದೆ ಎಂಬ ಮುನ್ನೆಚ್ಚರಿಕೆ ನೀಡಲು ಪ್ರತಿಭಟನೆ ಮಾಡಿದ್ದೇವೆ ಎಂದು ಶಾಸಕ ಹೇಳಿದ್ದಾರೆ.
ಸಿದ್ದರಾಮಯ್ಯ ಸುಭದ್ರ ಸರ್ಕಾರ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರು ಸರ್ಕಾರ ಕೆಡಿಯಲು ವಾಮ ಮಾರ್ಗ ಹಿಡಿಯುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಒಂದೇ ಒಂದು ತಪ್ಪು ಮಾಡಿದ್ರೆ ಬಿಜೆಪಿಯವರು ಹೇಳಿದ ಶಿಕ್ಷೆಗೆ ನಾನು ಗುರಿಯಾಗುತ್ತೇನೆ. ಆದರೆ ವಾಲ್ಮೀಕಿ ನಿಗಮದ ಹಗರಣ ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಈ ಸಂಬಂಧ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಅಧಿಕಾರಿಗಳು ಹಣ ಹೊಡೆದಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಹೊಣೆಯಲ್ಲ. ಜವಾಬ್ದಾರಿ ಹೊತ್ತು ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಶಿವಲಿಂಗೇಗೌಡ ಅವರು ತಿಳಿಸಿದ್ದಾರೆ.


