ಹೆಚ್ಚವರಿ ಅವಧಿಯಲ್ಲಿ ಬಿಬಿಎಂಪಿಗೆ ಪಾವತಿಯಾಯ್ತು 3000 ಕೋಟಿ ಆಸ್ತಿ ತೆರಿಗೆ

Share It

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹಕ್ಕೆ ತೆಗೆದುಕೊಂಡ ಅನೇಕ ಕಟ್ಟುನಿಟ್ಟಿನ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹದ ಪ್ರಮಾಣ ಹೆಚ್ಚಾಗಿದ್ದು, ಹೆಚ್ಚವರಿಯಾಗಿ ನೀಡಿದ್ದ ನಾಲ್ಕು ತಿಂಗಳ ಕಾಲಾವಧಿಯಲ್ಲಿ 6000 ಕೋಟಿ ಸಂಗ್ರಹವಾಗಿದೆ.

2023-24 ನೇ ಸಾಲಿನಲ್ಲಿ ಏಪ್ರಿಲ್ 2023 ರಿಂದ ಮಾರ್ಚ್ 2024 ರವೆರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2457.30 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು. ಇದೀಗ ಪ್ರಸ್ತುತ ಏಪ್ರಿಲ್, ಮೇ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ 3065.82 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ.

ಹೆಚ್ಚುವರಿ ಕಾಲಾವಕಾಶ, ದಂಡದ ಮೊತ್ತದಲ್ಲಿ ರಿಯಾಯಿತಿ ಹಾಗೂ ಹಳೆಯ ತೆರಿಗೆ ಪಾವತಿಗೆ ದಂಡ ರಿಯಾಯಿತಿ ನೀಡಿದ್ದು, ಬಾಕಿ ಉಳಿಸಿಕೊಂಡಿರುವವರ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದು ಸೇರಿದಂತೆ ಅನೇಕ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಾಗಿದೆ ಎನ್ನಬಹುದು.

2023-24 ನೇ ಸಾಲಿನಲ್ಲಿ ಒಟ್ಟಾರೆ 5523.12 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಮಹದೇವಪುರ ವಲಯದಲ್ಲಿ ಅತಿಹೆಚ್ಚು ಅಂದರೆ, 1400 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ದಾಸರಹಳ್ಳಿ ವಲಯದಲ್ಲಿ ಅತಿ ಕಡಿಮೆ ಎಂದರೆ 150 ಕೋಟಿ ರು. ಆಸ್ತಿ ತೆರಿಗೆ ಸಂಗ್ರಹವಾಗಿದೆ.


Share It

You May Have Missed

You cannot copy content of this page