ಬೆಂಗಳೂರು: ಏಪ್ರಿಲ್ 26ರಂದು ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏ.24 ರಿಂದ ಏ.26ರವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ, ಸಾಗಣೆ, ವಿತರಣೆ ಹಾಗು ಜಿಲ್ಲೆಗೆ ಹೊಂದಿಕೊಂಡ ತಮಿಳುನಾಡು ಗಡಿಯಲ್ಲಿನ ಮಳಿಗೆಗಳಲ್ಲಿ ಏ.17 ರಿಂದ 19ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ 24 ರಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜತೆಗೆ, ಮತ ಎಣಿಕೆಯ ದಿನವಾದ ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4 ರ ಮಧ್ಯರಾತ್ರಿ 12ಗಂಟೆವರೆಗೆ ಮದ್ಯ ಮಾರಾಟ, ಉತ್ಪಾದನೆ, ಮದ್ಯ ಸಾಗಾಣಿಕೆಯನ್ನು ನಿಲ್ಲಿಸಲು ಸೂಚಿಸಲಾಗಿದೆ.