ಮೂಡಾ ಸೈಟ್ ಖರೀದಿ ಅಕ್ರಮ ವಿರುದ್ಧದ ಪಾದಯಾತ್ರೆಗೆ ಎಚ್.ಡಿ.ಕೆ ಒಪ್ಪಿಗೆ
ದೆಹಲಿ: ಇಂದು ಸಂಸತ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಸೈಟ್ ಅಕ್ರಮದ ಬಗ್ಗೆ ಪಾದಯಾತ್ರೆ ನಡೆಸಲು ಜೆಡಿಎಸ್ ಪಕ್ಷದ ಬೆಂಬಲ ಪಡೆಯಲು ಯಶಸ್ವಿಯಾಗಿದ್ದಾರೆ.
ಇಂದು ಸಂಸತ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ವರಿಷ್ಠ ರಾಧಾಮೋಹನ್ ದಾಸ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರು ಭೇಟಿಯಾದರು. ಈ ಭೇಟಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಸೈಟ್ ಖರೀದಿ ಅಕ್ರಮ ಆರೋಪದ ಬಗ್ಗೆ ಮೈಸೂರಿನಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ಬೆಂಬಲ ಯಾಚಿಸಿತು.
ಆದರೆ ಏಕಾಏಕಿ ಪಾದಯಾತ್ರೆಗೆ ಬೆಂಬಲ ನೀಡಲು ಕೇಂದ್ರ ಸಚಿವ ಕುಮಾರಸ್ವಾಮಿ ಒಪ್ಪಲಿಲ್ಲ. ಆದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಕುಮಾರಸ್ವಾಮಿ ಭೇಟಿಯಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವೊಲಿಸಿದರು. ಕೊನೆಗೂ ಜೆ.ಪಿ.ನಡ್ಡಾ ಮನವೊಲಿಕೆ ನಂತರ ಪಾದಯಾತ್ರೆಗೆ ಬೆಂಬಲ ನೀಡಲು ಕುಮಾರಸ್ವಾಮಿ ಒಪ್ಪಿದರು. ಇದರಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಸೈಟ್ ಖರೀದಿ ಅಕ್ರಮದ ಬಗ್ಗೆ ಬಿಜೆಪಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಬೆಂಬಲ ನೀಡಲು ಜೆಡಿಎಸ್ ಕೊನೆಗೂ ಒಪ್ಪಿಕೊಂಡಂತಾಗಿದೆ.


