ದೂರುದಾರ ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್: ಸಿಎಂ ಸಿದ್ದರಾಮಯ್ಯ
ಮೈಸೂರು: ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ದಿನಾಂಕ : 26-07-2024 ರಂದು 11:30ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು,136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು.
ಅದರೆ ರಾಜ್ಯಪಾಲರು ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ. ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.


