ಬೆಂಗಳೂರು: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಇದರಿಂದ ಭಾರತದ ಮೇಲಾಗುವ ಪರಿಣಾಮಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಬಾಂಗ್ಲಾ ಭಾರತದ ನೆರೆಯ ರಾಷ್ಟ್ರವಾಗಿದ್ದು, ಅಲ್ಲಿ ನಡೆಯುವ ಯಾವುದೇ ಕ್ಷಿಪ್ರ ಬೆಳವಣಿಗೆ ಭಾರತದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಭಾರತ- ಬಾಂಗ್ಲಾ ಗಡಿಯಲ್ಲಿ ಕಟ್ಟೆಚ್ಚರ ವಹಿಸುವುದು ಅನಿವಾರ್ಯ. ಹೀಗಾಗಿ, ವಿಪಕ್ಷಗಳ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದಾರೆ.
ಬಾಂಗ್ಲಾದಲ್ಲಿನ ಅರಾಜಕತೆಯ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿದೆ ಎಂಬ ಆರೋಪವನ್ನು ಶೇಖ್ ಹಸೀನಾ ಪುತ್ರ ಮಾಡಿದ್ದು, ಇದು ಭಾರತದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸುವುದು ಕೇಂದ್ರ ಸರಕಾರದ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕೂಡ ಚರ್ಚೆ ನಡೆಯಲಿದೆ.

