ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Share It

ಬೆಂಗಳೂರು: ಅಕ್ರಮವಾಗಿ ಡಿನೋಟಿಫೈ ಮಾಡುವಂತೆ ಶಿಫಾರಸು ಮಾಡಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಡಿನೋಟಿಫೀಕೇಷನ್ ಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಬೇಕು ಎಂದು ರಾಜ್ಯಪಾಲರಿಗೆ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವವರಿಂದ ದೂರು ಸಲ್ಲಿಕೆಯಾಗಿದೆ.

ಆಶ್ರಯ ಮನೆ ಯೋಜನೆ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲು ಎಂದು 1979 ರಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಆಶ್ರಯ ಮನೆ ನಿರ್ಮಾಣಕ್ಕೆ ಹಂಚಲು ವರುಣಾ ಕ್ಷೇತ್ರದ ಉತ್ತನಹಳ್ಳಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು.

ಈ ಜಮೀನನ್ನು 30 ವರ್ಷದ ನಂತರ ಡಿನೋಟಿಫೈ ಮಾಡಲು ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ಮರಪ್ಪ ಎಂಬುವವರ ಹೆಸರಿನಲ್ಲಿ 1 ಎಕರೆ 39 ಗುಂಟೆ ಜಾಗವನ್ನು ಡಿನೋಟಿಪೈ ಮಾಡಲು ಶಿಫಾರಸು ಮಾಡಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿದ್ದರಾಮಯ್ಯ ಅವರ ಶಿಫಾರಸ್ಸು ಪತ್ರದ ನಂತರ 14 ತಿಂಗಳ ನಂತರ ಡಿನೋಟಿಫೈ ಪ್ರಕ್ರಿಯೆ ಮಾಡಿ, ಮೈಸೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮೈಸೂರು ಡಿಸಿ ಆದೇಶದ ವಿರುದ್ಧ ಮರು ದೂರು ಸಲ್ಲಿಕೆಯನ್ನು ಮಾಡಲಾಗಿದೆ ಎಂದು ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಕೃಷ್ಣ ಎಂಬುವವರು ಉಲ್ಲೇಖಿಸಿದ್ದಾರೆ.

ಈಗಾಗಲೇ, ಟಿ.ಜೆ. ಅಬ್ರಾಹಂ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಮುಂದಾಗಿ, ನೊಟೀಸ್ ನೀಡಿದ್ದರು. ಇದೀಗ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ರಾಜ್ಯಪಾಲರ ಮುಂದಿನ ನಡೆಯೇನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.


Share It

You cannot copy content of this page