ಬೆಂಗಳೂರು: ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಗ್ಯಾರಂಟಿ ಹಣ ಇಂದಿನಿಂದ ಜಮೆಯಾಗಲಿದೆ.
ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಕಳೆದೆರೆಡು ತಿಂಗಳಿಂದ ಮಹಿಳೆಯರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮೆ ಮಾಡಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಎಲ್ಲ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಜುಲೈ ಕೊನೆಯ ವಾರದಲ್ಲಿ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದರು. ಆಗಸ್ಟ್ ಮೊದಲ ವಾರ ಕಳೆದರೂ ಹಣ ಬಂದಿಲ್ಲ, ಹೀಗಾಗಿ, ಮಹಿಳೆಯರು ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ಗಳಿಗೆ ಅಲೆದು ಅಲೆದು ಸಾಕಾಗಿದ್ದರು.
ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಇಂದಿನಿಂದಲೇ ಫಲಾನುಭವಿಗಳ ಖಾತೆಗೆ ಜೂನ್ ಮತ್ತು ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.
