ಸುದ್ದಿ

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ 260 ಕ್ಕೂ ಹೆಚ್ಚು ಪೊಲೀಸರಿಂದ ದಿಢೀರ್ ದಾಳಿ

Share It

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳಗಾವಿ ಪೊಲೀಸರು ಬೆಳಗ್ಗೆ ಹೊತ್ತು ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ 40 ಅಧಿಕಾರಿಗಳು ಮತ್ತು 220 ಪೊಲೀಸ್ ಸಿಬ್ಬಂದಿ ಸೇರಿ 260 ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.

ತಂಬಾಕು ಪಾಕೆಟ್, ಸಿಗರೇಟ್, ಮೂರು ಚಾಕುಗಳು,ಸ್ಮಾಲ್ ಹೀಟರ್ ವೈರ್ ಬಂಡಲ್, ಎಲೆಕ್ಟ್ರಿಕಲ್ ಒಲೆ ಮುಂತಾದವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು, ನಮಗೆ ಖಚಿತ ಮಾಹಿತಿ ಲಭಿಸಿರುವ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದೇವೆ, ಸಿಗರೇಟ್, ತಂಬಾಕು ಪಾಕೆಟ್ ಸೇರಿದಂತೆ ಇತರ ವಸ್ತುಗಳು ಲಭಿಸಿದ್ದು, ಜೈಲಿನೊಳಗೆ ಇವುಗಳನ್ನು ಯಾರು ತೆಗೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. ತನಿಖೆ ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದರು.


Share It

You cannot copy content of this page