ಬೆಂಗಳೂರು:
ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಕರ್ನಾಟಕದಲ್ಲಿ ಏಪ್ರಿಲ್ 14ರ ವರೆಗೆ 345 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ.
ಪ್ರಸಕ್ತ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮಾ.16ರಿಂದ ಏಪ್ರಿಲ್ 14ರ ವರೆಗೆ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಆದಾಯ ತೆರಿಗೆ, ಅಬಕಾರಿ ಅಧಿಕಾರಿಗಳು ರಾಜ್ಯದಲ್ಲಿ ಒಟ್ಟು 355.78 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ಶೇ.49ರಷ್ಟು ಸ್ವತ್ತುಗಳನ್ನು ಸೂಕ್ತ ದಾಖಲೆ ಪತ್ರ ಆಧರಿಸಿ ವಾರಸುದಾರರಿಗೆ ಹಿಂತಿರುಗಿಸಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು. ಈವರೆಗೂ ನಡೆದಿರುವ 17 ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದ ನಗದು, ಮದ್ಯ, ಡ್ರಗ್ಸ್ ಪತ್ತೆಯಾಗಿರಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಗದು, ಮದ್ಯ, ಡ್ರಗ್ಸ್, ಬೆಲೆ ಬಾಳುವ ಲೋಹ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿರುವ ಪ್ರಕರಣಗಳಿಗೆ ಸಂಬಂಸಿದಂತೆ 1707 ಎಫ್ಐಆರ್ಗಳು ದಾಖಲಾಗಿವೆ. ಅಬಕಾರಿ ಇಲಾಖೆ ಘೋರ ಅಪರಾಧ ಅಡಿಯಲ್ಲಿ 2,200 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 2,828 ಪುಕರಣ ದಾಖಲಿಸಿದೆ. NDPS ಅಡಿಯಲ್ಲಿ 125 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15(a) ಅಡಿಯಲ್ಲಿ 15,013 ಪ್ರಕರಣಗಳನ್ನು ದಾಖಲಿಸಿದೆ. ಮತ್ತು 1,349 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಇಲಾಖೆಯವರು 23,46,000 ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ ಮದ್ಯವನ್ನು (8,970 ಲೀಟರ್ ಬಿಯರ್) KSBCL Depo, ಕೊತ್ತೂರು, ಕಮ್ಮಸಂದ್ರ ಗ್ರಾಮ, ವಿರ್ಗೊ ನಗರ ಅಂಚೆ, ಬೀದರಹಳ್ಳಿ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 49,88,275 ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ ಮದ್ಯವನ್ನು (9,108 ಲೀಟರ್ ಬಿಯರ್) KSBCL Depo-1, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78, ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 46,14,064 ರೂ. ಮೌಲ್ಯದ 13,800 ಲೀಟರ್ ಬಿಯರ್ ಅನ್ನು, KSBCL Depo-2, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78,
ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ,ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 89,25,507 ರೂ. ಮೌಲ್ಯದ 1,186.200 ಲೀಟರ್ ಮದ್ಯವನ್ನು, KSBCL Depo-2, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78, ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ,ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 55,62,739 ರೂ. ಮೌಲ್ಯದ 7386.120 ಲೀಟರ್ ಮದ್ಯವನ್ನು, KSBCL Depo ದೊಡ್ಡಕಮ್ಮನಹಳ್ಳಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಇಲ್ಲಿ ವಶಪಡಿಸಿಕೊಂಡಿದ್ದಾರೆ.