ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದರೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌರ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಎಕ್ಸ್ ಟ್ರೆಂಡ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿ, ನಂತರ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, “ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಹೇಳಿಕೆ ನೀಡಿದ್ಸರು.
ಈ ಹೇಳಿಕೆಯ ಬೆನ್ನಲ್ಲೇ ಎಕ್ಸ್ ನಲ್ಲಿ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಟ್ರೆಂಡ್ ಶುರುವಾಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ನಡೆಸಿದ ಆರೋಪವಿದೆ. ಆದರೆ, ಈವರೆಗೆ ಒಂದು ಮಾತನಾಡಿಲ್ಲ. ಬ್ರಿಜ್ ಭೂಷಣ್ ಆರೋಪಕ್ಕೂ ತುಟಿಬಿಚ್ಚಲಿಲ್ಲ. ಇಂತಹ ಮೋದಿಯವರು ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಮಾತುಗಳನ್ನಾಡುತ್ತಾರೆ ಎಂದು ಗೇಲಿ ಮಾಡಿದ್ದಾರೆ.
ಮೋದಿ ಅವರೊಂದಿಗೆ ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿ ಅವರ ಕುಟುಂಬದ ಸದಸ್ಯರ ಫೋಟೋ ವೈರಲ್ ಆಗಿದೆ.ಪ್ರಜ್ವಲ್ ರೇವಣ್ಣ ಹ್ಯಾಶ್ ಟ್ಯಾಗ್ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.