ಉಪಯುಕ್ತ ಸುದ್ದಿ

ಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷರಿಗೆ ಸಚಿವರಿಂದ ಸ್ವಾಗತ

Share It

ಬೆಂಗಳೂರು: ಆಪಲ್ ಫೋನ್ ಸೇರಿ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.

ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಹಾಜರಿದ್ದರು. ಫಾಕ್ಸ್ ಕಾನ್ ಕಂಪನಿ ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಲಿಯು ಇಲ್ಲಿಗೆ ಭೇಟಿ ನೀಡಿದ್ದಾರೆ.


Share It

You cannot copy content of this page