ಆರೋಗ್ಯ ಸುದ್ದಿ

ಇಂದು ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ

Share It

ಬೆಂಗಳೂರು:ಕೊಲ್ಕತ್ತಾದ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಇಂದು ರಾಜ್ಯದ ವೈದ್ಯಕೀಯ ಸಂಘಟನೆಗಳು ಪ್ರತಿಭಟನೆಗಿಳಿದಿವೆ.

ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಕೊಲೆ ಖಂಡಿಸಿ, ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದರು. ಕೆಲ ಕಿಡಿಗೇಡಿಗಳು ಆಸ್ಪತ್ರೆಗೆ ನುಗ್ಗಿ ಧಾಂದಲೆ ನಡೆಸಿದರು. ಇದು ಕೊಲ್ಕತ್ತಾದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣವಾಗಿತ್ತು.

ರಾಜ್ಯದಲ್ಲಿ ಕೂಡ ವೈದ್ಯಕೀಯ ಸಿಬ್ಬಂದಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಇಂದು ಶನಿವಾರ ಬಹುತೇಕ ವೈದ್ಯಕೀಯ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಔಟನೆಯಲ್ಲಿ ಭಾಗವಹಿಸಲು ತೀರ್ಮಾನಕಸಿದ್ದಾರೆ. ಹೀಗಾಗಿ, ರಾಜ್ಯಾದ್ಯಂತ ಇಂದು ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಪ್ರತಿಭಟನೆ ನಡೆಸುವುದು ತಪ್ಪಲ್ಲ, ಒಳ್ಳೆಯ ಉದ್ದೇಶಕ್ಕೆ ಪ್ರತಿಭಟನೆ ನಡೆಯುತ್ತಿದೆ‌. ಆದರೆ, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು. ಆರೋಗ್ಯ ಸೇವೆ ವ್ಯತ್ಯಯದಿಂದ ಮತ್ತಷ್ಟು ಜೀವಗಳು ಹೋಗುವಂತಾಗಬಾರದು. ಇದನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಿ, ನಿಮ್ಮ ಆಕ್ರೋಸವನ್ನು ಸಾಂಕೇತಿಕವಾಗಿ ಹೊರಹಾಕಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಈ ನಡುವೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ವಿವಿಧ ವೈದ್ಯಕೀಯ ಸಂಘಟನೆಗಳು ಕೈಜೋಡಿಸಿವೆ. ಸರಕಾರಿ ವೈದ್ಯಾಧಿಕಾರಿಗಳ ಒಕ್ಕೂಟ, ಫ್ಯಾರಮೆಡಿಕಲ್ ಸಿಬ್ಬಂದಿಗಳ ಒಕ್ಕೂಟ, ಖಾಸಗಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಸಾಥ್ ನೀಡುತ್ತಿವೆ.


Share It

You cannot copy content of this page