ಅಪರಾಧ ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ:ಸಂಕಷ್ಟ ಶುರು

Share It

ಬೆಂಗಳೂರು : ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತಷ್ಟು ಸಂಕಷ್ಟ ಶುರುವಾಗಿದ್ದು ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.

ಈ ವಿಚಾರವಾಗಿ ರಾಜಭವನಕ್ಕೆ ಬರುವಂತೆ ದೂರುದಾರರಾದ ಟಿ.ಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಅವರಿಗೆ ಬುಲಾವ್ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೂರುದಾರ ಟಿಜೆ ಅಬ್ರಾಹಂ, ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ಒಳ್ಳೆಯದು. ರಾಜಭವನ ಕಚೇರಿಯಿಂದ ನನಗೆ ದೂರವಾಣಿ ಕರೆ ಬಂದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದೇನೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಹಾಜರಾಗುತ್ತೇನೆ. ಯಾವುದೇ ದಾಖಲೆಗಳನ್ನ ತೆಗೆದುಕಂಡು ಬರುವುದಕ್ಕೆ ಹೇಳಿಲ್ಲ ಎಂದರು.

ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಿರ್ಧಾರವನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.


Share It

You cannot copy content of this page