ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದಿರುವ ಡಿಕೆಶಿ ನೇತೃತ್ವದ ಸಚಿವ ಸಂಪುಟ ಸಿಎಂ ಬೆನ್ನಿಗೆ ನಿಲ್ಲುವ ಘೋಷಣೆ ಮಾಡಿದೆ.
ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡಿಗರಿಂದ ಆಯ್ಕೆಯಾದ ಸರಕಾರ ಮತ್ತು ಮುಖ್ಯಮಂತ್ರಿ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಿದರು.

