ಬೆಂಗಳೂರು: ಕೋರಮಂಗಲದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಚ್.ಎಸ್.ಆರ್. ಲೇ ಔಟ್ ಪೊಲೀಸರು ಬಂಧಿಸಿದ್ದಾರೆ.
ಆಅರೋಪಿ ಬೈಕ್ ಸವಾರನನ್ನು ಮುಕೇಶ್ವರ್ ಎಂದು ಗುರುತಿಸಲಾಗಿದ್ದು, ಆರೋಪಿಯ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿದ್ಯಾರ್ಥಿನಿ ಹೊರರಾಜ್ಯದವಳಾಗಿದ್ದು, ಆಕೆ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕೋರಮಂಗಲದ ಪಬ್ ವೊಂದರಲ್ಲಿ ಪಾರ್ಟಿ ಮುಗಿಸಿಕೊಂಡು ಹೊರಡುವ ವೇಳೆ ಕಾರ್ ಕೆಟ್ಟು ಹೋದ ಕಾರಣಕ್ಕೆ ಯುವತಿ ಬೈಕ್ ಸವಾರನಿಂದ ಡ್ರಾಫ್ ತೆಗೆದುಕೊಂಡಿದ್ದರು. ಈ ವೇಳೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನಲೆ ಬೈಕ್ ಸವಾರನನ್ನು ಬಂಧಿಸಿರುವ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಪ್ರಕರಣದ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಎಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

