ಅಪರಾಧ ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಪರ ರಿಟ್ ಅರ್ಜಿ ಸಲ್ಲಿಕೆ

Share It

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ರಿಟ್ ಸಲ್ಲಿಕೆ ಮಾಡಲಾಗಿದೆ.

ಸಿದ್ದರಾಮಯ್ಯ ಪರ ವಕೀಲ ಶತಬೀಶ್ ಶಿವಣ್ಣ ಎಂಬುವವರು ಅರ್ಜಿ‌ ಸಲ್ಲಿಸಿದ್ದು, ಪ್ರಕರಣದ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಗನ್ನು ಪ್ರತಿವಾದಿಯನ್ನಾಗಿಸಿದ್ದಾರೆ. ಮೂವರು ದೂರುದಾರರು ಮತ್ತು ರಾಜ್ಯ ಸರಕಾರವನ್ನು ಪ್ರತಿವಾದಿಯಾಗಿಸಿ, ರಿಟ್ ಸಲ್ಲಿಕೆಯಾಗಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ಪರ ವಕೀಲರು ರಾಜ್ಯಪಾಲರು ನೋಡಿರುವ ಪ್ರಾಸಿಕ್ಯೂಷನ್ ಅನುಮತಿಗೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ದೂರುದಾರರಾದ ಟಿ.ಜೆ. ಅಬ್ರಾಹಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಕುಮಾರ್ ಅವರನ್ನು ಸಹ ರಿಟ್ ನಲ್ಲಿ ಪ್ರತಿವಾದಿಯಾಗಿ ಮಾಡಿದೆ. ಈಗಾಗಲೇ ರಾಜ್ಯಪಾಲರ ನಿರ್ಧಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಬಿಜೆಪಿ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರೆ, ಬಿಜೆಪಿ ಮತ್ತು ಜೆಡಿಎಸ್ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಈ ನಡುವೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿ ಇದೀಗ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ರಾಜ್ಯಪಾಲರ ಅಧಿಕಾರದ ವ್ಯಾಪ್ತಿಯನ್ನು ಕಾನೂನಿನ ಮೂಲಕ ನಿಯಂತ್ರಿಸುವ ಮತ್ತು ಅವರು ಕಾನೂನು ಮೀರಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದನ್ನು ನ್ಯಾಯಾಲಯದ ಮೂಲಕ ತಿಳಿಸುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ.


Share It

You cannot copy content of this page