ಬೆಂಗಳೂರು: ಮುಡಾ ಸೈಟ್ ಹಗರಣದ ವಿಚಾರಣೆಗೆ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ಆದೇಶ ಬಂದಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಜೀವನದಲ್ಲಿ ಮೊದಲ ಬಾರಿಗೆ ಆತಂಕ ಉಂಟಾಗಿತ್ತು. ಆದರೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದ, ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವ ಜಯತೆ ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.
ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ.
ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ,…
— Siddaramaiah (@siddaramaiah) August 19, 2024
ಸಿಎಂ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಎರಡು ಅರ್ಜಿ ಸಲ್ಲಿಕೆ ಆಗಿತ್ತು. ನಾಳೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಒಂದ್ವೇಳೆ ವಿಚಾರಣೆ ನಡೆದಿದ್ರೆ ಸಿಎಂಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇತ್ತು. ಆದ್ರೆ ವಿಶೇಷ ಕೋರ್ಟ್ನ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ಸೂಚಿಸಿದ್ದು, ಆಗಸ್ಟ್ 29 ರವರೆಗೂ ಸಿಎಂಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇದರೊಂದಿಗೆ ಮುಂದಿನ 10 ದಿನ ಸಿಎಂ ವಿರುದ್ಧ ಯಾವುದೇ ತನಿಖೆ, ಯಾವುದೇ ವಿಚಾರಣೆ ನಡೆಸುವಂತಿಲ್ಲ. ಯಾವುದೇ ಎಫ್ಐಆರ್ ದಾಖಲಾದ್ರೂ ಆಗಸ್ಟ್ 29ರವರೆಗೂ ಸಿಎಂರನ್ನ ಟಚ್ ಮಾಡಂಗಿಲ್ಲ.
ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.