ಬೆಂಗಳೂರು: ಮೂಡಾ ಹಗರಣದಲ್ಲಿ ರಾಜ್ಯಪಾಲರ ನಡೆ ಕುರಿತು ಚರ್ಚೆ ನಡೆಸಲು ಸಿಎಂ ಮತ್ತು ಡಿಸಿಎಂ ದೆಹಕಿಗೆ ತೆರಳಿದ್ದು, ಹೈಕಮಾಂಡ್ ನಾಯಕ ಜತೆ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸಲಿದ್ದಾರೆ.
ಗುರುವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಜತೆಗೆ ದೆಹಲಿಗೆ ತೆರಳಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸಚಿವ ಸಂಪುಟ ನೀಡಿರುವ ಸಲಹೆ, ಅವರ ಹಗರಣಗಳ ಕುರಿತು ನಡೆಸಬೇಕಾದ ಚರ್ಚೆ, ಇಂಡಿಯಾ ಒಕ್ಕೂಟದ ಬೆಂಬಲ ಸೇರಿ ಇನ್ನಿತರ ವಿಚಾರಗಳು ಚರ್ಚೆಗಳು ನಡೆಯಲಿವೆ.
ಬಿಜೆಪಿಯೇತರ ಮುಖ್ಯಮಂತ್ರಿ ಗಳ ಬೆಂಬಲ ಪಡೆಯುವುದು, ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಕೇಂದ್ರ ಸರಕಾರ ಕೊಡುತ್ತಿರುವ ಕಿರುಕುಳ ಸೇರಿ ಇನ್ನಿತರ ವಿಚಾರಗಳನ್ನು ಚರ್ಚಿಸಿ, ಜತೆಯಾಗಿ ಹೋರಾಟ ರೂಪಿಸುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.
