ಉಪಯುಕ್ತ ಸುದ್ದಿ

ಶೀಘ್ರದಲ್ಲೇ ರಾಜ್ಯದಲ್ಲಿ ಮದ್ಯ ದರ ಇಳಿಕೆ ಮಾಡಲು ಸರಕಾರ ತೀರ್ಮಾನ !

Share It

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲು ಮುಂದಾಗಿದೆ. ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ ಮುಂದಾಗಲಿದೆ ಎಂದು ತಿಳಿದು ಬಂದಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಇದರಿಂದಾಗಿ ಶೀಘ್ರದಲ್ಲೇ ಮದ್ಯ ದರ ಇಳಿಕೆಯಾಗುವ ಸಾಧ್ಯತೆ ಇದೆ.

ಪಕ್ಕದ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದರು. ಬಳಿಕ ಜುಲೈನಿಂದ ದರ ಹೆಚ್ಚಳ ಆಗಬೇಕಿತ್ತು, ಆದರೆ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

ನೆರೆಹೊರೆಯ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ಹಣ ನಷ್ಟವಾಗುತ್ತಿದೆ. ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯಸರ್ಕಾರ ಒಪ್ಪಿಗೆ ಸೂಚಿಸಿದೆ.

ಹೀಗಾಗಿ 16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1 ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಇದು ರಾಜ್ಯದ ಮದ್ಯಪ್ರಿಯರಿಗೆ ಸಿಹಿ ಸುದ್ದಿಯಾಗಿದೆ.


Share It

You cannot copy content of this page