ರಾಜಕೀಯ ಸುದ್ದಿ

ಬಿಜೆಪಿಯ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ: ಆನಂದ್ ನ್ಯಾಮಗೌಡ ಹೊಸ ಬಾಂಬ್ !

Share It

ಬಾಗಲಕೋಟೆ : ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ವಿಡಿಯೋ ಇರುವ ಸಿಡಿ ಬಿಡುಗಡೆಯಾಗಲಿದೆ ಎಂದು ಮಾಜಿ ಶಾಸಕ ಆನಂದ‌ ನ್ಯಾಮಗೌಡ ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ‌ನಗರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶನಿವಾರ ಮಾತನಾಡಿದ ಅವರು, ಇವತ್ತೊಂದು ಹೊಸ ಸುದ್ದಿ ಬಂದಿದೆ. ನೀವು ಕೇಳಿದ್ದೀರೋ ಇಲ್ಲವೋ ಗೊತ್ತಿಲ್ಲ. ಇವತ್ತೇ ಆ ಸುದ್ದಿ ಕೇಳಿದ್ದೇನೆ. ಅದೇನಪ್ಪಾ ಅಂದರೆ, ರಾಜ್ಯದ ಮಾಜಿ ಮುಖ್ಯಮಂತ್ರಿ ಅವರ ಒಂದು ಅಶ್ಲೀಲ‌ ಸಿಡಿ ಹೊರಗೆ ಬರೋದಿದೆ ಎಂದರು.

ಆ ಅಶ್ಲೀಲ‌ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೇ. ಬಿಜೆಪಿ ಮಾಜಿ ‌ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆನಂದ್ ನ್ಯಾಮಗೌಡ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರತಿಭಟನಾ ಭಾಷಣದಲ್ಲಿ ನ್ಯಾಮಗೌಡ ಸಿಡಿ ಕುರಿತು ಅವರು ಈ ಹೇಳಿಕೆ ನೀಡಿದ್ದಾರೆ.


Share It

You cannot copy content of this page