ಹೊಳಲ್ಕೆರೆ ಪಟ್ಟಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಯಾದವ-ಗೊಲ್ಲ ಸಮಾಜದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧೆ, ಭಕ್ತಿ ಭಾವದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕರಾದ ಡಾ. ಎಂ. ಚಂದ್ರಪ್ಪ ಮಾತನಾಡಿ ಶ್ರೀಕೃಷ್ಣ ಪರಮಾತ್ಮ ಗೊಲ್ಲ ಸಮುದಾಯಕ್ಕಷ್ಟೇ ಅಲ್ಲ, ಸರ್ವ ಜನಾಂಗಕ್ಕೂ ಪೂಜ್ಯ ದೇವರು ಎಂದು ನೆನಪಿಸಿದರು.
ಈಗಾಗಲೇ ತಾಲೂಕಿನ ಗೊಲ್ಲ ಸಮುದಾಯಕ್ಕೆ ಸರ್ಕಾರದಿಂದ 3 ಎಕರೆ ಜಮೀನನ್ನು ಜನಾಂಗದ ಅಭಿವೃದ್ಧಿಗೆ ಮಂಜೂರು ಮಾಡಿಸಲಾಗಿದ್ದು, ಆ ಜಮೀನಿನಲ್ಲಿ ಮುಂಬರುವ ದಿನಗಳಲ್ಲಿ ಶ್ರೀಕೃಷ್ಣನ 101 ಅಡಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುವುದು ಹಾಗೂ ಶೈಕ್ಷಣಿಕ ಅಭಿವೃದ್ಧಿ ಮತ್ತು ಇತರೆ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಈ ಸಮಾಜ ಬಹಳಷ್ಟು ಹಿಂದುಳಿದ ಸಮಾಜವಾಗಿದ್ದು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ ಪರಿವರ್ತನೆ ಆಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯದ ತಾಲೂಕು ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರೂ ಆದ ದುಮ್ಮಿ ಚಿತ್ತಪ್ಪ ಅವರು ಮಾತನಾಡಿ, ನಮ್ಮ ತಾಲೂಕಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಶೀಘ್ರದಲ್ಲಿ ಸಭೆ ಕರೆದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ಅದ್ದೂರಿ ಕೃಷ್ಣ ಜಯಂತಿ ಹಾಗೂ ಗೊಲ್ಲ ಸಮುದಾಯದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷರಾದ ಬಿ.ಬಿ ಫಾತಿಮಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಪುರಸಭೆಯ ಮಾಜಿ ಅಧ್ಯಕ್ಷರಾದ ಅಶೋಕ್, ಪುರಸಭೆ ಸದಸ್ಯರಾದ ಸವಿತಾ ಬಸವರಾಜ, ಯಾದವ್ ಗೊಲ್ಲ ಸಮುದಾಯದ ಪ್ರಧಾನ ಕಾರ್ಯದರ್ಶಿ ತಿರುಮಲಾಪುರದ ತಿಮ್ಮಪ್ಪ, ಆವಿನಹಟ್ಟಿ ಬಂಗಾರಪ್ಪ, ವಿಶ್ವನಾಥಹಳ್ಳಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಾನೇಂದ್ರಪ್ಪ, ಶ್ರೀಧರ್, ಹೊಳಲ್ಕೆರೆ ಲೋಕೇಶ್, ತಿರುಮಲಾಪುರದ ದಾಸಪ್ಪ, ಪುಣಜೂರು ರಾಮಚಂದ್ರಪ್ಪ ಮತ್ತಿತರೆ ಯಾದವ ಗೊಲ್ಲ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.