ನವದೆಹಲಿ/ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗ ಸಚಿಬರಾಗಿದ್ದ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಬಳಿಕ ಹೈಕೋರ್ಟ್ ಸಹ ಜಾರ್ಜ್ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು (ಆಗಸ್ಟ್ 27) ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಬೀತಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ಸಚಿವ ಕೆ.ಜೆ ಜಾರ್ಜ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ/ಸಿಐಡಿ ತನಿಖಾ ತಂಡಗಳು ಬಿ.ರಿಪೋರ್ಟ್ ಸಲ್ಲಿಸಿದ್ದವು. ದಿವಂಗತ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಈ ಸಂಬಂಧ ಕೆ. ಜೆ.ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನೆ ಮಾಡಿ ಗಣಮತಿ ಅವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ, ಇಂದು ಸುಪ್ರೀಂಕೋರ್ಟ್ ಸಹ ಸಬೀತಾ ಅವರ ಅರ್ಜಿಯನ್ನು ವಜಾ ಮಾಡಿದೆ.
ಪ್ರಕರಣ ಹಿನ್ನೆಲೆ: ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ ಅವರು ಮೂಲತಃ ಕೊಡಗಿನವರು. 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.