ಉಪಯುಕ್ತ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗೆ ಹೆಲ್ಪ್ ಲೈನ್

Share It


ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲುವುದಕ್ಕಾಗಿ ದೂರವಾಣಿ ಸಂಖ್ಯೆಯಾದ 9480683972 ಗೆ ಕರೆ ಮಾಡಬಹುದೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಸೂಚಿಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ ಹಾಗೂ ಯುವ ಶಕ್ತಿ ಯೋಜನೆಗಳ ಕುರಿತಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ಅಥವಾ ಸಮಸ್ಯೆಗಳನ್ನು ಹೇಳುವ ಸಲುವಾಗಿ ದೂರವಾಣಿ ಸಂಖ್ಯೆ 9480683972 ಯನ್ನು ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಹೇಳಿದರು.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಯಾವುದಾದರು ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಕುಂದುಕೊರತೆ ಪರಿಶೀಲಿಸಿ, ಯಾವುದೇ ಅರ್ಹ ಫಲಾನುಭವಿಗಳು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಜನಾರ್ಧನ್, ರಮೇಶ್ ಹೆಚ್, ನೌಶೀರ್ ಅಹ್ಮದ್, ಬಿ.ಎಸ್ ಗೋಪಾಲ ಕೃಷ್ಣ, 28 ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಅವಿನಾಶ್ ಮೆನನ್ ರಾಜೇಂದ್ರನ್, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಗಳ ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ, ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ತೆರೆಯಲಾಗಿದೆ. ಪ್ರತಿ ವಾರ ಫಲಾನುಭವಿಗಳ ಸಭೆ ನಡೆಸಿ ಕುಂದು ಕೊರತೆ ಆಲಿಸಲಾಗುತ್ತಿದೆ. ಜತೆಗೆ ಫಲಾನುಭವಿಗಳ ಜತೆ ಸಂವಾದ ಹಮ್ಮಿಕೊಳ್ಳಲಾಗುತ್ತಿದೆ‌. ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಲಾಗಿದ್ದು, ಅದನ್ನು ಹಿರಿಯರ ಜತೆ ಚರ್ಚಿಸಲಾಗಿದೆ. ಅಧಿಕಾರಿಗಳಿಗೆ ಈ ಸಂಬಂಧ ಮಾಹಿತಿ ನೀಡಲಾಗಿದೆ.

  • ಪ್ರಮೋದ್ ಶ್ರೀನಿವಾಸ್,
    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ,
    ಪದ್ಮನಾಭ ನಗರ

Share It

You cannot copy content of this page