ಬೆಂಗಳೂರು: ನಂದಿನ ನಮ್ಮ ನಾಡಿನ ರೈತರ ಹೆಮ್ಮೆಯಾಗಿದ್ದು, ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ನಾವೇ ರಾಯಭಾರಿಗಳಾಗಬೇಕು ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಿಳಿಸಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರು ಬಮೂಲ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಅವರಿಗೆ ನಂದಿನಿ ಉತ್ಪನ್ನಗಳನ್ನು ಉಡುಗೊರೆಯಾಗಿ ನೀಡಿದ ಅವರು, ಅವುಗಳನ್ನು ಬಳಸಿ, ಇನ್ನಷ್ಟು ಜನರಿಗೆ ಬಳಸಲು ಪ್ರೇರೇಪಿಸುವಂತೆ ಕೇಳಿಕೊಂಡರು. ಈ ಸಂದರ್ಭದಲ್ಲಿ ಸೌಮ್ಯ ರೆಡ್ಡಿ ಅವರು ನಂದಿನಿ ಉತ್ಪನ್ನಗಳಿಗೆ ನಾವೇ ರಾಯಭಾರಿಗಳಾಗಬೇಕು ಎಂದು ಕರೆ ನೀಡಿದರು.